ರಾಜ್ಯ

ಅಡಿಕೆ–ತೆಂಗು ರೈತರ ಸಂಕಷ್ಟ ನಿವಾರಣೆಗಾಗಿ ಕೇಂದ್ರ ಕೃಷಿ ಸಚಿವರ ಭೇಟಿ; ನಿಯೋಗದೊಂದಿಗೆ ಮನವಿ ಹೊಸದಿಲ್ಲಿ

ದಾವಣಗೆರೆ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗವು ಗುರುವಾರ ಭೇಟಿಯಾಗಿ, ತೆಂಗು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ಪರಿಹಾರಕ್ಕಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಈ ನಿಯೋಗದಲ್ಲಿ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಉಪಸ್ಥಿತರಿದ್ದರು ಹಾಗೂ ದಾವಣಗೆರೆ ಕ್ಷೇತ್ರದಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟಗಳ ಕುರಿತು ಗಮನಸೆಳೆದರು. ಈ ನಿಯೋಗವು ಅಡಿಕೆ ಮತ್ತು ಮಾನವ ಆರೋಗ್ಯದ ಮೇಲೆ “ಪ್ರಮಾಣಾಧಾರಿತ ಸಂಶೋಧನೆ” ನಡೆಸಲು ಕೃಷಿ ಸಚಿವಾಲಯ ಮಂಜೂರು ಮಾಡಿದ ನಿಧಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿತು.

ಅಡಿಕೆ ರೈತರು ಎದುರಿಸುತ್ತಿರುವ ಹಳದಿ ಎಲೆ ಹಾಗೂ ಹುಳು ರೋಗಗಳಿಗೆ ಸಮಗ್ರ ದೀರ್ಘಕಾಲಿಕ ಅಧ್ಯಯನ ನಡೆಸಲು ಖ್ಯಾತ ವೈಜ್ಞಾನಿಕ ಸಂಸ್ಥೆಗಳ ಪಾಲ್ಗೊಳ್ಳುವಿಕೆ ಅಗತ್ಯವೆಂದು ತಿಳಿಸಲಾಯಿತು. ಅಡಿಕೆಯ ಅಕ್ರಮ ಆಮದು ತಡೆಗಟ್ಟಲು ಕಸ್ಟಮ್ಸ್ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ, ಆಮದು ಅನುಮತಿಗೆ ಮುನ್ನ CAMPCO, TSS, MAMCOS ಮುಂತಾದ ಸಹಕಾರಿಗಳ ಸಲಹೆ ಪಡೆಯುವುದು ಸೂಕ್ತವೆಂದು ಸೂಚಿಸಲಾಯಿತು. ಹೆಚ್ಚಿನ ಪ್ರಮಾಣದ ಸಾಗಾಟಗಳಿಗೆ GPS ಟ್ರ್ಯಾಕಿಂಗ್ ಮತ್ತು ತಪಾಸಣಾ ಕೇಂದ್ರಗಳಲ್ಲಿ CCTV ಅಳವಡಿಕೆಯಿಂದ ಅಕ್ರಮ ವಹಿವಾಟು, ಅಂಡರ್-ಬಿಲ್ಲಿಂಗ್ ತಡೆಗಟ್ಟಲು ಸಾಧ್ಯವೆಂದು ಅಭಿಪ್ರಾಯ ವ್ಯಕ್ತವಾಯಿತು. ಅಡಿಕೆಯ ಮೇಲಿನ GST ದರವನ್ನು 5% ನಿಂದ 2% ಕ್ಕೆ ಇಳಿಸುವಂತೆ ಮನವಿ ಮಾಡಲಾಯಿತು. GPS ಟ್ರ್ಯಾಕಿಂಗ್ ಮತ್ತು ಇ-ಡಾಕ್ಯುಮೆಂಟೇಶನ್ ಕಡ್ಡಾಯಗೊಳಿಸಿದರೆ ತೆರಿಗೆ ನಷ್ಟವಿಲ್ಲದೆ ಆದಾಯವನ್ನು ಕಾಪಾಡಬಹುದೆಂದು ಸೂಚಿಸಲಾಯಿತು.

ಜೊತೆಗೆ, ಗೋದಾಮುಗಳ ಕೊರತೆಯಿಂದ ಸಣ್ಣ ರೈತರು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾವಾರು ಗೋದಾಮು ನಿರ್ಮಾಣಕ್ಕೆ ಸಹಕಾರಿಗಳಿಗೆ ಸಬ್ಸಿಡಿ ಆಧಾರಿತ ನೆರವು ನೀಡುವಂತೆ ಮನವಿ ಮಾಡಲಾಯಿತು. ಇತ್ತೀಚೆಗೆ ಅಮೆರಿಕಾದಲ್ಲಿ ಅಡಿಕೆ ಎಲೆಗಳಿಂದ ತಯಾರಾದ ಬಯೋಡಿಗ್ರೇಡಬಲ್ ತಟ್ಟೆಗಳು ಕ್ಯಾನ್ಸರ್ ಉಂಟುಮಾಡುತ್ತವೆ ಎಂಬ ವರದಿ ರಫ್ತು ಹಾನಿಗೊಳಗಾಗಲು ಕಾರಣವಾದ ಹಿನ್ನೆಲೆಯಲ್ಲಿ, ಭಾರತದಲ್ಲಿಯೇ ವೈಜ್ಞಾನಿಕ ಅಧ್ಯಯನ ನಡೆಸಿ ಸೂಕ್ತ ಮಾಹಿತಿಯನ್ನು ಒದಗಿಸುವ ಅಗತ್ಯವಿದೆ ಎಂದು ತಿಳಿಸಲಾಯಿತು. ಹವಾಮಾನ ಬದಲಾವಣೆಯಿಂದ ಬೆಳೆಗಳಿಗೆ ಉಂಟಾಗುತ್ತಿರುವ ಪರಿಣಾಮಗಳನ್ನು ಗಮನಿಸಿ ಮಳೆ, ವಿಪತ್ತು ಹಾಗೂ ರೋಗಗಳ ಕುರಿತು ನಿಖರ ಮಾಹಿತಿ ಪಡೆಯಲು ಆಧುನಿಕ ತಂತ್ರಜ್ಞಾನ ಬಳಕೆಯ ಅಗತ್ಯತೆಯನ್ನು ನಿಯೋಗ ಒತ್ತಿ ಹೇಳಿತು. ಬೆಳೆ ವಿಮೆ ಯೋಜನೆಗಳನ್ನು ಬಲಿಷ್ಠ ಮತ್ತು ತಂತ್ರಜ್ಞಾನ ಆಧಾರಿತವಾಗಿಸಲು ಕೇಂದ್ರ–ರಾಜ್ಯ ಸರ್ಕಾರಗಳ ಸಮನ್ವಯ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ದಾವಣಗೆರೆ ಕ್ಷೇತ್ರದ ಅಡಿಕೆ ಬೆಳೆಗಾರರ ಸಂಕಷ್ಟಗಳ ಕುರಿತು ಸಹ ನಿಯೋಗದಲ್ಲಿ ಪ್ರಸ್ತಾಪವಾಯಿತು.ಅಡಕೆಗೆ ಪ್ರತ್ಯೇಕ ‌ಮಂಡಳಿ ರಚನೆ ಕುರಿತು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಈಗಾಗಲೇ ಸದನದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.ಕ್ಷೇತ್ರದ ಅಡಕೆಬೆಳಗಾರರ ಹಿತ ರಕ್ಷಣೆಗಾಗಿ ಸಂಸದರು‌‌ ಧ್ವನಿ ಎತ್ತಿದ್ದು ಬೆಳಗಾರರಲ್ಲಿ ಸಂತಸ ಮೂಡಿಸಿದೆ. ಈ ನಿಯೋಗದಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಆಹಾರ, ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಶಕ್ತಿ ಸಚಿವರಾದ ಪ್ರಹ್ಲಾದ್ ಜೋಶಿ, ರೈಲು ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಸೇರಿದಂತೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ವೈ. ರಾಘವೇಂದ್ರ, ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಕೋಟ ಶ್ರೀನಿವಾಸ ಪೂಜಾರಿ, ಯದುವೀರ್ ಒಡೆಯರ್, ಗೋವಿಂದ ಕಾರಜೋಳ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ ಹಾಗೂ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕೊಡ್ಗೆ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

5 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

5 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

6 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

6 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

6 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

6 hours ago