ಬೆಂಗಳೂರು: ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು, ಉಪಗ್ರಹ ಆಧಾರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಅರಣ್ಯ ಭವನದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ನಡೆದ ಅರಣ್ಯ ಭೂಮಿ ಒತ್ತುವರಿ ತಡೆ ಮತ್ತು ವೃಕ್ಷ ಸಂರಕ್ಷಣೆ ಕುರಿತ ಸಭೆಯಲ್ಲಿ ಸಚಿವರು ಸೂಚನೆ ನೀಡಿದರು.
ಈಗಾಗಲೇ ಅಕ್ಷಾಂಶ ಮತ್ತು ರೇಖಾಂಶದ ಆಧಾರದ ಮೇಲೆ ಜಿಯೋ ರೆಫರೆನ್ಸ್ ಮೂಲಕ ರಾಜ್ಯದ ಅರಣ್ಯ ಪ್ರದೇಶದ ಗಡಿಗಳನ್ನು ಗುರುತಿಸಲಾಗಿದ್ದು, ಈ ದತ್ತಾಂಶವನ್ನು ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಮಾಹಿತಿ ನೀಡಿ, ಮರಗಳ ಕಡಿತಲೆ ಮತ್ತು ಭೂ ಒತ್ತುವರಿಯ ಕುರಿತಂತೆ ಸಕಾಲಿಕ ಎಚ್ಚರಿಕೆ ನೀಡುವ ವ್ಯವಸ್ಥೆಯೊಂದನ್ನು ಆದಷ್ಟು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ.
ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೆ ಇಸ್ರೋದ ರಾಷ್ಟ್ರೀಯ ದೂರ ಸಂವೇದಿ ಕೇಂದ್ರಕ್ಕೆ ಮಾಹಿತಿ ಬರುತ್ತದೆ. ಅಲ್ಲಿಂದ ಭಾರತೀಯ ಅರಣ್ಯ ಸರ್ವೇಕ್ಷಣಾ ಇಲಾಖೆಗೆ ಮಾಹಿತಿ ರವಾನೆ ಆಗುತ್ತದೆ. ಬಳಿಕ ಸಂಬಂಧಿತ ಅರಣ್ಯ ವಲಯದ ಸಿಬ್ಬಂದಿಗೆ ಎಚ್ಚರಿಕೆ ಹೋಗಲು ಇರುವ ವ್ಯವಸ್ಥೆಯ ಮಾದರಿಯಲ್ಲಿಯೇ ಮರಗಳ ಅಕ್ರಮ ಕಡಿತಲೆ ಮತ್ತು ಅರಣ್ಯ ಭೂಮಿ ಒತ್ತುವರಿಗೂ ಒಂದು ಎಚ್ಚರಿಕೆ ರವಾನೆ ವ್ಯವಸ್ಥೆ ಕಲ್ಪಿಸಿ ಎಂದು ಖಡಕ್ ಸೂಚನೆ ನೀಡಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಟ್ಟದಲ್ಲಿ ಬಾಕಿ ಇರುವ ಎಲ್ಲಾ 64 ಎ ಪ್ರಕರಣಗಳನ್ನು ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಮುಂದಿರುವ ಮೇಲ್ಮನವಿಯನ್ನು ಕಾಲಮಿತಿಯಲ್ಲಿ ಅಂದರೆ ಒಂದು ವರ್ಷದೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…