ರಾಜ್ಯ

ಈಶ್ವರ ಖಂಡ್ರೆ ಸೂಚನೆ : ಕಾಡುಗೋಡಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ

2 ವರ್ಷದಲ್ಲಿ ಒಟ್ಟು 248 ಎಕರೆ ಅರಣ್ಯ ಒತ್ತುವರಿ ತೆರವು

ಬೆಂಗಳೂರು : ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ (Eshwara Khandre) ಅವರ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್‌ನ ಸರ್ವೆ ನಂ.1ರಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಇಂದು ಬೆಳಗ್ಗೆಯೇ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಬೆಂಗಳೂರು ನಗರ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಕಾಡುಗೋಡಿಯ ಪ್ಲಾಂಟೇಷನ್‌ನ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿ, ಮರು ವಶಕ್ಕೆ ಪಡೆದು, ಗಡಿ ಗುರುತಿಸಿ ಸ್ಥಳೀಯ ಪ್ರಭೇದದ ಸಸಿಗಳನ್ನು ನೆಡುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇಂದು ವಶಪಡಿಸಿಕೊಳ್ಳಲಾದ ಅರಣ್ಯ ಭೂಮಿಯ ಮಾರುಕಟ್ಟೆ ಮೌಲ್ಯ ಸುಮಾರು 4 ಸಾವಿರ ಕೋಟಿ ರೂಪಾಯಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಕಾಡುಗೋಡಿ ಅರಣ್ಯ ಪ್ರದೇಶ ಕುರಿತಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು, ಬೆಂಗಳೂರು ವ್ಯಾಪಕವಾಗಿ ಬೆಳೆಯುತ್ತಿದ್ದು, ಹಸಿರು ಹೊದಿಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಹೀಗಾಗಿ ಶ್ವಾಸತಾಣಗಳ ಸಂರಕ್ಷಣೆ ಮಾಡಬೇಕು, ನಿಯಮಾನುಸಾರ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದರು.

2 ವರ್ಷದಲ್ಲಿ ಒಟ್ಟು 248 ಎಕರೆ ಅರಣ್ಯ ಒತ್ತುವರಿ ತೆರವು: ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕಳೆದ 2 ವರ್ಷದಲ್ಲಿ ಬೆಂಗಳೂರಿನಲ್ಲಿ ಒಟ್ಟು 128 ಎಕರೆ ಅರಣ್ಯ ಭೂಮಿ ಒತ್ತವರಿ ತೆರವುಗೊಳಿಸಲಾಗಿದ್ದು, ಈ 120 ಎಕರೆ ಸೇರಿದರೆ, ಒಟ್ಟು 248 ಎಕರೆ ಆಗಲಿದ್ದು, ಇದರ ಮಾರುಕಟ್ಟೆ ಮೌಲ್ಯ 8 ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ.

ಇದನ್ನು ಓದಿದ್ರಾ..?: – 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರಿಯುವ ಗುರಿ : ಶಾಸಕ ಗಣಿಕ ರವಿಕುಮಾರ್

ಆಂದೋಲನ ಡೆಸ್ಕ್

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

2 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

2 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

2 hours ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

2 hours ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

2 hours ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

2 hours ago