ರಾಜ್ಯ

ಮಾನವನ ದುರಾಸೆಯಿಂದಲೇ ಅರಣ್ಯ ಸಂಪತ್ತು ನಾಶವಾಗುತ್ತಿದೆ: ಸಚಿವ ಈಶ್ವರ ಖಂಡ್ರೆ ಬೇಸರ

ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ ವ್ಯಾಪ್ತಿ ಕೆಲವೇ ವರ್ಷಗಳಲ್ಲಿ ಶೇ.33ಕ್ಕೆ ತಲುಪುವುದರಲ್ಲಿ ಸಂದೇಹವಿಲ್ಲ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಆದರೆ ಸಾಧಿಸುವ ಛಲ, ಇಚ್ಛಾಶಕ್ತಿ ಇರಬೇಕು. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರೂ ಕಾಡನ್ನು ಉಳಿಸಿ, ಬೆಳೆಸುವ ಸಂಕಲ್ಪ ಮಾಡಿ, ಹೊಸ ಒತ್ತುವರಿಗೆ ಅವಕಾಶ ನೀಡದೆ, ಮಾನವೀಯ ನೆಲೆಗಟ್ಟಿನಲ್ಲಿ ಈಗಾಗಲೇ ಆಗಿರುವ ಒತ್ತುವರಿ ತೆರವು ಮಾಡಿಸಬೇಕು ಎಂದು ಸೂಚಿಸಿದರು.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ಪ್ರಕೃತಿ, ಪರಿಸರದ ಮೇಲಾಗುತ್ತಿದೆ. ಮಾಲಿನ್ಯ ಹೆಚ್ಚಳದಿಂದ ಕಡಿಯುವ ನೀರೂ ವಿಷವಾಗಿ ಜನರು ಅಸ್ವಸ್ಥರಾಗುತ್ತಿರುವುದನ್ನು ನೋಡುತ್ತಿದ್ದೇವೆ. ಈ ನಿಟ್ಟಿನಲ್ಲಿ ಪರಿಸರ, ಪ್ರಕೃತಿ ಉಳಿಸುವ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು. ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

1864ರ ಜನವರಿ 11ರಂದು ಅರಣ್ಯ ಸಂರಕ್ಷಣೆಗಾಗಿ ಮೈಸೂರು ಅರಣ್ಯ ಇಲಾಖೆ ಸ್ಥಾಪಿಸಲಾಯಿತು. 1700ರ ದಶಕದಲ್ಲಿ ಸೇನೆಯ ಬಳಕೆಗಾಗಿ ಇದ್ದ ಮದ್ರಾಸು-ಕಣ್ಣೂರು ರಸ್ತೆಯ ನಿರ್ವಹಣೆಗಾಗಿ ಅತ್ಯುತ್ತಮ ತೇಗದ ಮರಗಳು ಸೇರಿದಂತೆ ಅರಣ್ಯ ನಾಶವಾಯಿತು. ನಂತರ 1799ರ ಮೈಸೂರು ಯುದ್ಧದ ಬಳಿಕ ಶ್ರೀರಂಗಪಟ್ಟಣದ ಪತನವಾದ ಮೇಲೆ ಮೈಸೂರಿನ ಸ್ಥಳೀಯ ವೃಕ್ಷ ಸಂಪತ್ತಿನ ಮೇಲೆ ಪ್ರಭಾವ ಬೀರಿತು ಎಂದ ಇತಿಹಾಸದ ಘಟನೆಗಳನ್ನು ಸ್ಮರಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

17 mins ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

36 mins ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

46 mins ago

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

1 hour ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

1 hour ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

2 hours ago