Mysore
30
scattered clouds

Social Media

ಭಾನುವಾರ, 09 ಫೆಬ್ರವರಿ 2025
Light
Dark

ಚಿಕ್ಕಮಗಳೂರು| ಚಾರ್ಮಾಡಿ ಘಾಟ್‌ನಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಜಿಲ್ಲೆಯ ಚಾರ್ಮಾಡಿ ಘಾಟ್‌ನಲ್ಲಿ ನಿನ್ನೆ ತಡರಾತ್ರಿ ಕಾಡ್ಗಿಚ್ಚು ಕಾಣಿಸಿದ್ದು, ನೂರಾರು ಎಕರೆಯ ಅರಣ್ಯ ನಾಶವಾಗಿದೆ. ಈ ವೇಳೆ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಯವರು ಹರಸಾಹಸ ಮಾಡಿದ್ದಾರೆ.

ಕಳೆದ ವಾರವಷ್ಟೇ ಚಾರ್ಮಾಡಿ ಘಾಟ್‌ನ ಬಿದಿರುತಳ ತಪ್ಪಲಿನ ಕಾಡಿನಲ್ಲಿ ಕಾಡ್ಗಿಚ್ಚು ಆವರಿಸಿ ಅರಣ್ಯ ಹಾಗೂ ಪ್ರಾಣಿ ಸಂಕುಲ ನಾಶವಾಗಿತ್ತು. ಇದೀಗ ಮತ್ತೊಮ್ಮೆ ಶುಕ್ರವಾರ(ಜನವರಿ.24)ದಂದು ತಡರಾತ್ರಿ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆಯ ಶೋಲಾ ಅರಣ್ಯ ಸುಟ್ಟು ಭಸ್ಮವಾಗಿದೆ. ಈ ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಮಾಡಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿಯವರು ರಸ್ತೆಬದಿ ಬೆಂಕಿಯನ್ನು ನಂದಿಸಿದರೆ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರು ಗುಡ್ಡ ಹತ್ತಿ ಬೆಂಕಿ ನಂದಿಸಲು ಸಾಧ್ಯವಾಗದೇ ಪರದಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 10 ಕಿ.ಮೀ.ನಷ್ಟು ದೂರಕ್ಕೆ ಬೆಂಕಿ ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿತ್ತು. ಆದರೆ ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರ ಹೋರಾಟದಿಂದ ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.

Tags: