ರಾಜ್ಯ

ಚಿಕ್ಕಮಗಳೂರು| ಚಾರ್ಮಾಡಿ ಘಾಟ್‌ನಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಜಿಲ್ಲೆಯ ಚಾರ್ಮಾಡಿ ಘಾಟ್‌ನಲ್ಲಿ ನಿನ್ನೆ ತಡರಾತ್ರಿ ಕಾಡ್ಗಿಚ್ಚು ಕಾಣಿಸಿದ್ದು, ನೂರಾರು ಎಕರೆಯ ಅರಣ್ಯ ನಾಶವಾಗಿದೆ. ಈ ವೇಳೆ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಯವರು ಹರಸಾಹಸ ಮಾಡಿದ್ದಾರೆ.

ಕಳೆದ ವಾರವಷ್ಟೇ ಚಾರ್ಮಾಡಿ ಘಾಟ್‌ನ ಬಿದಿರುತಳ ತಪ್ಪಲಿನ ಕಾಡಿನಲ್ಲಿ ಕಾಡ್ಗಿಚ್ಚು ಆವರಿಸಿ ಅರಣ್ಯ ಹಾಗೂ ಪ್ರಾಣಿ ಸಂಕುಲ ನಾಶವಾಗಿತ್ತು. ಇದೀಗ ಮತ್ತೊಮ್ಮೆ ಶುಕ್ರವಾರ(ಜನವರಿ.24)ದಂದು ತಡರಾತ್ರಿ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆಯ ಶೋಲಾ ಅರಣ್ಯ ಸುಟ್ಟು ಭಸ್ಮವಾಗಿದೆ. ಈ ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಮಾಡಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿಯವರು ರಸ್ತೆಬದಿ ಬೆಂಕಿಯನ್ನು ನಂದಿಸಿದರೆ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರು ಗುಡ್ಡ ಹತ್ತಿ ಬೆಂಕಿ ನಂದಿಸಲು ಸಾಧ್ಯವಾಗದೇ ಪರದಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 10 ಕಿ.ಮೀ.ನಷ್ಟು ದೂರಕ್ಕೆ ಬೆಂಕಿ ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿತ್ತು. ಆದರೆ ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರ ಹೋರಾಟದಿಂದ ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

23 mins ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

2 hours ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

5 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

5 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

5 hours ago