Mysore
23
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ಬಂಡೀಪುರದಲ್ಲಿ ಏಪ್ರಿಲ್.1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ: ಕಾರಣ ಇಷ್ಟೇ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.

ಈ ಕುರಿತು ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ಉಪಾಧ್ಯಕ್ಷ ಎಸ್.‌ಎಸ್.‌ಹರೀಶ್‌ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಸುಮಾರು 6000 ತಾತ್ಕಾಲಿಕ ಸಿಬ್ಬಂದಿ ಇದ್ದಾರೆ. ಇವರಲ್ಲಿ 4000ಕ್ಕೂ ಹೆಚ್ಚು ಮಂದಿ ಮುಷ್ಕರದಲ್ಲಿ ಭಾಗವಹಿಸಲು ಸಮ್ಮತಿಸಿದ್ದಾರೆ. ವಾಚರ್‌ಗಳು, ಗಾರ್ಡ್‌ಗಳು, ಡ್ರೈವರ್‌ಗಳು ಸೇರಿದಂತೆ ಅರಣ್ಯದ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದ್ದಾರೆ.

ಈ ಮುಷ್ಕರದಿಂದ ಅರಣ್ಯ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆ ಮತ್ತು ದಿನನಿತ್ಯದ ಕಾರ್ಯಗಳಿಗೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.

 

Tags:
error: Content is protected !!