ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಅದರ ಕುರಿತು ಪರಾಮರ್ಶಿಸಲು ರಾಜ್ಯ ಸರ್ಕಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ಅಧ್ಯಕ್ಷರಾಗಿದ್ದಾರೆ. ಸಚಿವರಾದ ಎಚ್. ಸಿ.ಮಹದೇವಪ್ಪ, ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಸಮಿತಿಯ ಪ್ರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಂಪುಟ ಉಪ ಸಮಿತಿಗೆ ಅಗತ್ಯ ನೆರವು ನೀಡುವುದಾಗಿದೆ.
ಈ ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ. ಔಷಧಿ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲಾ ವಿಷಯವನ್ನು ಈ ಸಮಿತಿ ನಿರ್ಧರಿಸಲಿದೆ.
ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ(ಡಿಸೆಂಬರ್ 21) ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ಮಾಡಿದ್ದರು. ಈ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಅಲ್ಲದೇ ಕೋವಿಡ್ ನಿರ್ವಹಣೆಗೆಂದು ಒಂದು ಸಂಪುಟ ಉಪಸಮಿತಿ ರಚಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಸಂಪುಟ ಉಪಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…