ಕನಕಗಿರಿ : ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ “ರಾಜಾ ಉಡಚಪ್ಪ ನಾಯಕ” ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ ಬದ್ದವಾಗಿದೆ ಎಂದರು.
ಸರ್ವೋದಯ, ಸರ್ವದರ್ಮ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಈ ದಿಕ್ಕಿನಲ್ಲೇ ನಮ್ಮ ಸರ್ಕಾರ ಮುನ್ನಡೆಯಲಿದೆ. ಕೊಪ್ಪಳ ನನ್ನದೇ ಕ್ಷೇತ್ರ. ಈ ಜಿಲ್ಲೆಯ ಜನರ ಪ್ರೀತಿಗೆ ನಾನು ಸದಾ ಋಣಿ ಎಂದು ಕೃತಜ್ಞತೆ ಸಲ್ಲಿಸಿದರು.
ಶ್ರೀ ವೇದಮೂರ್ತಿ ಭುವನೇಶ್ವರಯ್ಯ ತಾತನವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರೂ, ಕೊಪ್ಪಳ ಜಿಲ್ಲಾ ಸಚಿವರಾದ ಶಿವರಾಜ್ ತಂಗಡಗಿ ಸಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…