ರಾಜ್ಯ

ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರ ರಚನೆ: ಸಿ.ಎಂ.ಮಹತ್ವದ ಘೋಷಣೆ

ಕನಕಗಿರಿ :  ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ “ರಾಜಾ ಉಡಚಪ್ಪ ನಾಯಕ” ವೇದಿಕೆಯಲ್ಲಿ‌ ಉದ್ಘಾಟಿಸಿ ಮಾತನಾಡಿದ ಅವರು, ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ ಬದ್ದವಾಗಿದೆ ಎಂದರು.

ಸರ್ವೋದಯ, ಸರ್ವದರ್ಮ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಈ ದಿಕ್ಕಿನಲ್ಲೇ ನಮ್ಮ ಸರ್ಕಾರ ಮುನ್ನಡೆಯಲಿದೆ. ಕೊಪ್ಪಳ ನನ್ನದೇ ಕ್ಷೇತ್ರ. ಈ ಜಿಲ್ಲೆಯ ಜನರ ಪ್ರೀತಿಗೆ ನಾನು ಸದಾ ಋಣಿ ಎಂದು ಕೃತಜ್ಞತೆ ಸಲ್ಲಿಸಿದರು.

ಶ್ರೀ ವೇದಮೂರ್ತಿ ಭುವನೇಶ್ವರಯ್ಯ ತಾತನವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರೂ, ಕೊಪ್ಪಳ ಜಿಲ್ಲಾ ಸಚಿವರಾದ ಶಿವರಾಜ್ ತಂಗಡಗಿ ಸಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

4 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

5 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

6 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

12 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

12 hours ago