Mysore
25
haze

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ 83ನೇ ಹುಟ್ಟುಹಬ್ಬದ ಸಂಭ್ರಮ 

ಬೆಂಗಳೂರು: ನಾಡಿನ ಹಿರಿಯ ಮುತ್ಸದ್ಧಿ, ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು 83ನೇ ಹುಟ್ಟುಹಬ್ಬದ ಸಂಭ್ರಮ.

ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಬಿಎಸ್‌ವೈ ಮನೆಗೆ ಭೇಟಿ ನೀಡಿದ ಅವರ ಮಕ್ಕಳಾದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಅಪ್ಪನಿಗೆ ಬರ್ತ್‌ಡೇ ವಿಶ್‌ ಮಾಡಿ, ಆಶೀರ್ವಾದ ಪಡೆದುಕೊಂಡಿದ್ದಾರೆ.

ಈ ಮೊದಲಿನಂತೆ ಬಿ.ಎಸ್.ಯಡಿಯೂರಪ್ಪ ಅವರು ರಾಜಕಾರಣದಲ್ಲಿ ಸಕ್ರಿಮವಾಗಿಲ್ಲವಾದರೂ ರಾಜ್ಯ ಬಿಜೆಪಿ ಘಟಕದಲ್ಲಿ ಅವರ ಮಾತಿಗೆ ತೂಕ ಜಾಸ್ತಿ ಇದೆ. ರಾಜ್ಯದ ವಿದ್ಯಾಮಾನಗಳಿಗೆ ಸಂಬಂಧಿಸಿದಂತೆ ಅವರ ಸಲಹೆ ಇಲ್ಲದೇ ಹೈಕಮಾಂಡ್‌ ಯಾವ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ.

ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಲ್ಲಿ ಯಡಿಯೂರಪ್ಪ ಅವರು ಮಾಸ್‌ ಲೀಡರ್‌ ಆಗಿದ್ದು, ಅವರ ಮಾತನ್ನು ಯಾರೂ ಕೂಡ ಚಾಚು ತಪ್ಪದೇ ಪಾಲಿಸಿಕೊಂಡು ಬರುತ್ತಿದ್ದಾರೆ.

Tags:
error: Content is protected !!