Mysore
18
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಶಾಸಕ ಯತ್ನಾಳ್‌ ತಂಡದ ವಿರುದ್ಧ ಮಾಜಿ ಸಿಎಂ ಬಿಎಸ್‌ವೈ ಬೇಸರ

ಬೆಂಗಳೂರು: ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಿರೋದು ಅವರಿಗೆ ಶೋಭೆ ತರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಹಾಗೂ ಎಲ್ಲರೂ ಕೂಡ ತಮ್ಮ ಹೋರಾಟ ಬಿಟ್ಟು ನಮ್ಮ ಜೊತೆ ಕೈಜೋಡಿಸಿ ಎಂದು ವಿಜಯೇಂದ್ರ ಮನವಿ ಮಾಡಿದ್ದರು. ಆದರೆ ಅವರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ. ಈಗಲಾದರೂ ಜಾಗೃತರಾಗಿ ಪಕ್ಷ ಬಲಪಡಿಸಲು ಸಹಕಾರ ನೀಡುವಂತೆ ಕೋರುತ್ತೇನೆ. ನಾವು ಕೂಡ ಮನವಿ ಮಾಡುತ್ತೇವೆ. ಆದರೆ ಉಳಿದದ್ದು ಅವರಿಗೆ ಹಾಗೂ ಕೇಂದ್ರ ನಾಯಕರಿಗೆ ಬಿಟ್ಟ ವಿಚಾರ ಎಂದರು.

ಇನ್ನು ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಮೂರು ಕ್ಷೇತ್ರಗಳಲ್ಲೂ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ. ಏನು ಕೊರತೆಯಾಗಿದೆ ಎಂಬುದರ ಬಗ್ಗೆ ಎಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ. ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಿ ಕೆಲಸ ಮಾಡುತ್ತೇವೆ. ಮೂರು ಕ್ಷೇತ್ರಗಳ ಸೋಲಿಗೆ ನಾನು ಹಾಗೂ ವಿಜಯೇಂದ್ರ ಕಾರಣ ಎನ್ನುವ ಪ್ರಶ್ನೆ ಬರಲ್ಲ. ಎಲ್ಲರೂ ಸೇರಿ ಜವಾಬ್ದಾರಿ ಹೊರಬೇಕಾಗುತ್ತದೆ ಎಂದರು.

 

Tags:
error: Content is protected !!