Mysore
27
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

It’s been two and a half years without grants for MLAs: MP Basavaraj Bommai mocks

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮಾಯಿ ತಿರಸ್ಕರಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಮತ್ತು ಧನ್ಯವಾದಗಳು ಎಂದು ಹೇಳಿದ್ದಾರೆ.

ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವ ಎಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜಸೇವೆಯಲ್ಲಿ ತೊಡಗಿರುವವರಿಗೆ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.

ಮತ್ತೊಮೆ ವಿನಯಪೂರ್ವಕವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ತಿಳಿಸುತ್ತಾ, ಹಾವೇರಿ ವಿಶ್ವವಿದ್ಯಾಲಯಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.

 

Tags:
error: Content is protected !!