Mysore
24
scattered clouds

Social Media

ಸೋಮವಾರ, 12 ಜನವರಿ 2026
Light
Dark

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲ್ಯಾಕ್‌ ಪೇಪರ್‌ ಬಿಡುಗಡೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ: ಬಜೆಟ್‌ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್‌ನಲ್ಲಿ ಮೀಸಲಿಟ್ಟ ಹಣವೆಷ್ಟು ಖರ್ಚಾಗಿರುವ ಹಣವೆಷ್ಟು ಎಂಬುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ ಎಲ್ಲಿ ವಿಫಲವಾಗಿದೆ ಎನ್ನುವುದನ್ನು ಬ್ಲ್ಯಾಕ್‌ ಪೇಪರ್‌ ಬಿಡುಗಡೆ ಮಾಡಲು ರಾಜ್ಯ ಬಿಜೆಪಿ ಘಟಕ ಸಿದ್ದರಾಗಬೇಕು ಎಂದು ಸೂಚಿಸುವುದಾಗಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನ ಆಂತರಿಕ ವಿಚಾರದಲ್ಲಿ ಯಾವುದೇ ರೀತಿಯ ಹೇಳಿಕೆ ನೀಡಲು ಸಿದ್ಧವಿಲ್ಲ. ಜನರು ಇವರಿಗೆ ಆಡಳಿತ ನಡೆಸಲು ಅವಕಾಶ ಕೊಟ್ಟಿದ್ದಾರೆ. ಅದನ್ನು ಮಾಡಲು ಇವರಿಗೆ ಸಮಯವಿಲ್ಲ. ಯಾಕೆಂದರೆ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಇಲಾಖೆ ಹಾಗೂ ನಿಗಮಗಳ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವರ್ಷ ಹಿಂದುಳಿದ ವರ್ಗಗಳ ನಿಗಮಗಳಿಗೆ ಎಷ್ಟು ಹಣ ಖರ್ಚಾಗಿದೆ ಎಂದು ಸಿಎಂ ಮಾಡಿರುವ ಸಭೆಯಲ್ಲಿ ಚರ್ಚೆಯೇ ಆಗಲಿಲ್ಲ. ಹಿಂದುಳಿದ ವರ್ಗಗಳ ನಾಯಕರು ಸಿಎಂ ಸಿದ್ದರಾಮಯ್ಯರನ್ನು ಕೇಳಬೇಕಿತ್ತು. ಅದನ್ನು ವಿರೋಧ ಪಕ್ಷವಾಗಿ ಬಿಜೆಪಿ ಮಾಡುತ್ತದೆ ಎಂದು ಹೇಳಿದರು.

 

Tags:
error: Content is protected !!