ಹಾವೇರಿ: ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್‌ನಲ್ಲಿ ಮೀಸಲಿಟ್ಟ ಹಣವೆಷ್ಟು ಖರ್ಚಾಗಿರುವ ಹಣವೆಷ್ಟು ಎಂಬುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ ಎಲ್ಲಿ ವಿಫಲವಾಗಿದೆ ಎನ್ನುವುದನ್ನು ಬ್ಲ್ಯಾಕ್ ಪೇಪರ್ ಬಿಡುಗಡೆ ಮಾಡಲು ರಾಜ್ಯ ಬಿಜೆಪಿ ಘಟಕ ಸಿದ್ದರಾಗಬೇಕು ಎಂದು ಸೂಚಿಸುವುದಾಗಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನ ಆಂತರಿಕ ವಿಚಾರದಲ್ಲಿ ಯಾವುದೇ ರೀತಿಯ ಹೇಳಿಕೆ ನೀಡಲು ಸಿದ್ಧವಿಲ್ಲ. ಜನರು ಇವರಿಗೆ ಆಡಳಿತ ನಡೆಸಲು ಅವಕಾಶ ಕೊಟ್ಟಿದ್ದಾರೆ. ಅದನ್ನು ಮಾಡಲು ಇವರಿಗೆ ಸಮಯವಿಲ್ಲ. ಯಾಕೆಂದರೆ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಇಲಾಖೆ ಹಾಗೂ ನಿಗಮಗಳ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವರ್ಷ ಹಿಂದುಳಿದ ವರ್ಗಗಳ ನಿಗಮಗಳಿಗೆ ಎಷ್ಟು ಹಣ ಖರ್ಚಾಗಿದೆ ಎಂದು ಸಿಎಂ ಮಾಡಿರುವ ಸಭೆಯಲ್ಲಿ ಚರ್ಚೆಯೇ ಆಗಲಿಲ್ಲ. ಹಿಂದುಳಿದ ವರ್ಗಗಳ ನಾಯಕರು ಸಿಎಂ ಸಿದ್ದರಾಮಯ್ಯರನ್ನು ಕೇಳಬೇಕಿತ್ತು. ಅದನ್ನು ವಿರೋಧ ಪಕ್ಷವಾಗಿ ಬಿಜೆಪಿ ಮಾಡುತ್ತದೆ ಎಂದು ಹೇಳಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…