ರಾಜ್ಯ

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಅಧಿವೇಶನದಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭಾ ಅಧಿವೇಶನದಲ್ಲಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣದಲ್ಲಿ‌ ಸಕ್ರಿಯರಾಗಿದ್ದರು.‌

ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ.

ಎಸ್.ಎಂ.ಕೃಷ್ಣ ಅವರು 1962ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ‌ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.

ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.

ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು‌. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿತ್ತು, ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ, ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ.

ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು.

ಈಗ ಅವರ ಅಗಲಿಕೆ ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

1 hour ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

3 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

3 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

4 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

4 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

5 hours ago