ಬೆಂಗಳೂರು: ರಾಜ್ಯ ಬಿಜೆಪಿ ಬಣದಲ್ಲಿ ದಿನದಿಂದ ದಿನಕ್ಕೆ ಬಡಿದಾಟ ಜೋರಾಗುತ್ತಿದ್ದು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯದ ಬೇಎ ಬೇರೆ ಕಡೆಯಿಂದ ಬಂದ ವರದಿಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಗಂಭೀರವಾಗಿ ಚರ್ಚೆ ಮಾಡದಿರುವುದು ಒಂದು ಕಾರಣ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಿದರೂ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಿದ್ದರೆ ಒಂದಷ್ಟು ಗೊಂದಲಗಳು ಕಡಿಮೆಯಾಗುತ್ತಿದ್ದವು. ಆಂತರಿಕವಾಗಿ ಇಷ್ಟು ದೊಡ್ಡ ಕಚ್ಚಾಟಗಳಿವೆ ಎಂದು ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ ಅವರು, ಈಗ ಮೊದಲು ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಬೇಕಿದೆ. ರಾಜ್ಯಾಧ್ಯಕ್ಷರು ಕೊಟ್ಟ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ. ಅತೃಪ್ತರನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ವಿಫಲರಾದರು ಎಂದು ಕಿಡಿಕಾರಿದರು.