ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಶನಿವಾರ ಎಸ್‌ಐಟಿ ಅಧಿಕಾರಿಗಳಿಗೆ ಶರಣಾಗಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರೇವಣ್ಣ ಪ್ರಕರಣದಲ್ಲಿ ಕಾನೂನಿನ ಪ್ರಕಾರ ಎಲ್ಲಾ ಕ್ರಮಗಳು ಜರುಗಲಿವೆ. ಕಾನೂನಿಗಿಂತ ದೊಡ್ಡವರು ಯಾರಿಲ್ಲ ಎಂದಿದ್ದಾರೆ.
ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕೆಂದು ಸ್ವತಃ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಕಾನೂನಿಗೆ ತಲೆ ಬಾಗಿ ರೇವಣ್ಣ ಎಸ್‌ಐಟಿ ತಂಡಕ್ಕೆ ಶರಣಾಗಿದ್ದಾರೆ. ಈ ನೆಲದಲ್ಲಿ ಕಾನೂನು ಅಂತಿಮ. ಕಾನೂನಿನ ಪ್ರಕಾರ ಮುಂದಿನ ಕ್ರಮ ನಡೆಯಲಿದೆ ಎಂದರು.
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಇಳಿ ವಯಸ್ಸಿನಲ್ಲಿ ಇಂತಹ ವಿದ್ಯಮಾನ ನೋಡಿ ಬೇಸರ ತಂದಿದೆ. ಆದಷ್ಟು ಬೇಗ ಸತ್ಯಾಂಶ ಹೊರಬರಬೇಕು. ದೇವೇಗೌಡರು ಈ ಬಗ್ಗೆ ಯೋಚಿಸದೆ. ತಮ್ಮ ಆರೋಗ್ಯದ ಕಡೆ ಗಮನಹರಿಸಲಿ ಎಂದು ಯಡಿಯೂರಪ್ಪ ಮನವಿ ಮಾಡಿದರು.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…