ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ.
ಸಮನ್ಸ್ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ಇದನ್ನು ಓದಿ: ಬಾಲಕಿಗೆ ದೌರ್ಜನ್ಯ : 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ..!
ಇತ್ತೀಚೆಗೆ ಹೈಕೋರ್ಟ್‍ನ ಏಕಸದಸ್ಯ ಪೀಠ ಯಡಿಯೂರಪ್ಪ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ವಿಚಾರಣೆ ಎದುರಿಸುವಂತೆ ಆದೇಶಿಸಿತ್ತು.
ಇದೀಗ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಲು ಬಿಎಸ್‍ವೈ ಮುಂದಾಗಿದ್ದಾರೆ. ಈ ಸಂಬಂಧ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ನವದೆಹಲಿಗೆ ತೆರಳಿದ್ದು, ವಕೀಲರನ್ನು ಭೇಟಿ ಮಾಡಿ ಕಾನೂನು ಹೋರಾಟ ನಡೆಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ.





