ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ ಜೈರಾಜ್ ಅವರು, ಅಲ್ಲಿನ ಪ್ರಸಿದ್ಧ ಚನ್ನಬಸವೇಶ್ವರ ಚಿತ್ರಮಂದಿರದ ಮಾಲೀಕರಾಗಿದ್ದರು.
2019ರಲ್ಲಿ ಪ್ರದರ್ಶಕರ ವಲಯದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಹಲವಾರು ಚಿತ್ರಗಳ ವಿತರಣೆ ಹಾಗೂ ಪ್ರದರ್ಶನದಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇಂದು ಮಧ್ಯಾಹ್ನದ ನಂತರ ಅವರ ಹುಟ್ಟೂರಾದ ಗುಬ್ಬಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…