ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪದಡಿ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಇಂದು ಇಡಿ ಕಸ್ಟಡಿ ಅವಧಿ ಮುಕ್ತಾಯವಾಗಿತ್ತು.
ಈ ಹಿನ್ನೆಲೆಯಲ್ಲಿ ಇಂದು ನಾಗೇಂದ್ರರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಇಡಿ ಅಧಿಕಾರಿಗಳು ಮತ್ತಷ್ಟು ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.
ಅಧಿಕಾರಿಗಳ ಮನವಿ ಆಲಿಸಿದ ನ್ಯಾಯಾಲಯ ಮಾಜಿ ಸಚಿವ ನಾಗೇಂದ್ರರನ್ನು ಮತ್ತೆ ಐದು ದಿನಗಳ ಕಾಲ ಅಂದರೆ ಜುಲೈ.22ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.