ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳು ಯಾರಾಗುತ್ತಾರೆ ಎಂದು ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿರುವ ಮಧ್ಯೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರಿಗೆ ಬಿಗ್‌ಶಾಕ್ ನೀಡಿದ್ದಾರೆ.
ಈಗಾಗಲೇ ಸಿ.ಪಿ.ಯೋಗೇಶ್ವರ್ ಅವರು, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ವಾಟ್ಸಾಪ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರಿಗೆ ಕೈ ಬರಹದ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ, ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಸಿಪಿವೈ ಕಾಣಿಸಿಕೊಂಡಿದ್ದು, ಬಳಿಕ ಡಿಕೆಶಿ ಜೊತೆಯಲ್ಲೇ ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಸಿದ್ದು ಆರ್ಶೀವಾದ ಪಡೆದುಕೊಂಡಿದ್ದಾರೆ.
ಬಳಿಕ ಮಧ್ಯಾಹ್ನದ ವೇಳೆಗೆ ಸಿ.ಪಿ.ಯೋಗೇಶ್ವರ್ ಅವರು ಅಧಿಕೃತವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮೈತ್ರಿ ನಾಯಕರಿಗೆ ಟಕ್ಕರ್ ಕೊಡಲು ಮುಂದಾಗಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…