ರಾಜ್ಯ

ಮಾಜಿ ಸಚಿವ ಜನಾರ್ಧನ ರೆಡ್ಡಿ ಶಾಸಕತ್ವಕ್ಕೆ ಮರುಜೀವ

ಬೆಂಗಳೂರು: ತೆಲಂಗಾಣ ಹೈಕೋರ್ಟ್‍ನ ಆದೇಶದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಅವರ ಶಾಸಕತ್ವಕ್ಕೆ ಮರುಜೀವ ದೊರೆತಿದೆ.

ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಪ್ರಧಾನ ನ್ಯಾಯಾಲಯ ನೀಡಿದ್ದ ಘೋಷಿತ ಅಪರಾಧಿ ಎಂಬ ತೀರ್ಪಿನ ಪರಿಣಾಮ ಗಂಗಾವತಿ ವಿಧಾನಸಭಾ ಕ್ಷೇತ್ರದ ಸದಸ್ಯತ್ವದಿಂದ ಜನಾರ್ಧನ ರೆಡ್ಡಿ ಅವರನ್ನು ಅನರ್ಹಗೊಳಿಸಲಾಗಿತ್ತು.

ತೆಲಂಗಾಣ ಹೈಕೋರ್ಟ್ ಸಿಬಿಐ ವಿಶೇಷ ಪ್ರಧಾನ ನ್ಯಾಯಾಲಯದ ಆದೇಶವನ್ನು ಅಮಾನತ್ತಿನಲ್ಲಿಟ್ಟಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದಿನ ತೀರ್ಪಿಗೆ ಒಳಪಟ್ಟು ಜನಾರ್ಧನ ರೆಡ್ಡಿ ಶಾಸಕತ್ವ ಅನರ್ಹಗೊಳಿಸಿದ್ದ ಆದೇಶವನ್ನು ವಿಧಾನಸಭೆ ಸಚಿವಾಲಯ ತಡೆ ಹಿಡಿದಿದೆ.

ಈ ಸಂಬಂಧ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅಧಿಸೂಚನೆ ಹೊರಡಿಸಿದ್ದಾರೆ. ಹೀಗಾಗಿ ಜನಾರ್ಧನ ರೆಡ್ಡಿ ಶಾಸಕತ್ವ ಸದ್ಯಕ್ಕೆ ಉಳಿದುಕೊಂಡಂತಾಗಿದೆ.

ಆಂದೋಲನ ಡೆಸ್ಕ್

Recent Posts

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

30 mins ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

38 mins ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

2 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

3 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

3 hours ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

3 hours ago