Mysore
23
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ರಾಜ್ಯದಲ್ಲಿ ಹಿಂದೂ ಹೆಣ್ಣು ಮಕ್ಕಳಿಗೆ ಬೆಲೆ ಇಲ್ಲದಂತಾಗಿದೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ರಾಜ್ಯವನ್ನು ಮುಸ್ಲಿಮರಿಗೆ ಮಾರಿ ಬಿಟ್ಟರೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹಾವೇರಿಯಲ್ಲಿ ಸ್ವಾತಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಹಿಂದೂ ಹೆಣ್ಣು ಮಕ್ಕಳಿಗೆ ಬೆಲೆ ಇಲ್ಲದಂತಾಗಿದೆ. ಒಂದು ವೇಳೆ ಮುಸ್ಲಿಂ ಹುಡುಗಿಗೆ ಈ ರೀತಿ ಆಗಿದ್ದರೆ ರಾಜ್ಯದಲ್ಲಿ ಏನಾಗುತ್ತಿತ್ತು ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದರು.

ಮುಸ್ಲಿಂಮರು ರಾಜ್ಯದಲ್ಲಿ ಏನು ಬೇಕಾದರೂ ಮಾಡಬಹುದೇ? ನಮ್ಮ ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿದರೂ ಸುಮ್ಮನಿರಬೇಕು. ಪೊಲೀಸ್‌ ಜೀಪ್‌ಗಳಿಗೂ ಬೆಂಕಿ ಹಚ್ಚಿದರೂ ಸುಮ್ಮನಿರಬೇಕು ಎಂದು ವಾಗ್ದಾಳಿ ನಡೆಸಿದರು.

 

Tags:
error: Content is protected !!