ದಾವಣಗೆರೆ: ರಾಜ್ಯದಲ್ಲಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ದಾವಣಗೆರೆಯಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಇದರಿಂದ ಜನಸಾಮಾನ್ಯರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಹಳ್ಳ ಹಿಡಿದಿವೆ.
ಗೃಹಲಕ್ಷ್ಮೀಯರಿಗೆ ಕಳೆದ ನಾಲ್ಕು ತಿಂಗಳಿನಿಂದಲೂ ಹಣ ಜಮೆ ಆಗಿಲ್ಲ. ಇದನ್ನು ಪ್ರಶ್ನಿಸಿದರೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೇಜಾವಾಬ್ದಾರಿ ಹೇಳಿಕೆ ನೀಡುತ್ತಾರೆ ಎಂದು ಕಿಡಿಕಾರಿದರು.
ಇನ್ನು ಗೃಹಲಕ್ಷ್ಮೀ ಯೋಜನೆಯೂ ಈಗ ಹಳ್ಳ ಸೇರಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.





