Mysore
21
broken clouds

Social Media

ಮಂಗಳವಾರ, 07 ಏಪ್ರಿಲ 2026
Light
Dark

ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್‌ ವಿಧಿವಶ

ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಹಾನಗಲ್‌ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್‌ ತಹಶೀಲ್ದಾರ್‌ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ವಿಧಿವಶರಾಗಿದ್ದಾರೆ.

ಕಳೆದ 2015ರಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗದ ಕಾರಣ ಕಾಂಗ್ರೆಸ್‌ ತೊರೆದು ಜೆಡಿಎಸ್‌ ಪಕ್ಷ ಸೇರಿದ್ದರು.

ಬಳಿಕ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಮನೋಹರ್‌ ತಹಶೀಲ್ದಾರ್‌ ಅವರು ನಾಲ್ಕು ಜನ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

 

Tags:
error: Content is protected !!