ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ವಿಧಿವಶರಾಗಿದ್ದಾರೆ.
ಕಳೆದ 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರಿದ್ದರು.
ಬಳಿಕ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಮನೋಹರ್ ತಹಶೀಲ್ದಾರ್ ಅವರು ನಾಲ್ಕು ಜನ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…