Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ವಾಲ್ಮೀಕಿ ಹಗರಣ ; ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ಕೋರ್ಟ್‌ ಮುಂದೆ ಹಾಜರುಪಡಿಸಲಿದ್ದಾರೆ.

ಇನ್ನು ನಾಗೇಂದ್ರ ಅವರು ಇಡಿ ಕಸ್ಟಡಿಯಲ್ಲಿರುವಾಗಲೇ ಅವರ ಪತ್ನಿ ಮಂಜುಳಾರನ್ನು ಸಹ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿ ಅಕ್ರಮದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ ಎನ್ನಲಾಗಿದೆ. ಉಳಿದಂತೆ ಆರೋಪಿಗಳು ಚುನಾವನೆಯ ವೇಳೆ ಎಣ್ಣೆಗೆ ಹಣ ಬಳಸಿರುವ ಬಗ್ಗೆ ಮಾಹಿತಿ ನೀಡಿದ್ದರು. ಅಕ್ರಮದ ಬಗ್ಗೆ ಇಡಿ ಅಧಿಕಾರಿಗಳ ಪ್ರಶ್ನೆಗೆ ನಾಗೇಂದ್ರ ಸರಿಯಾಗಿ ಉತ್ತರಿಸಿದ ಕಾರಣ ಇಂದು ಮತ್ತೊಮ್ಮೆ ಇಡಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.

ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರ ಕಂಡುಬಂದ ಹಿನ್ನೆಲೆ ಇಡಿ ಅಧಿಕಾರಿಗಳು ಅವರನ್ನುಬಂಧಿಸಿ ೧೧ ದಿನಗಳ ಕಾಲ ತನಿಖೆ ನಡೆಸಿದ್ದರು. ನಾಗೇಂದ್ರ ಅವರನ್ನ ಆರಂಭದಲ್ಲಿ ೬ ದಿನ ಕಸ್ಟಡಿಗೆ ಪಡೆದಿದ್ದ ಅಧಿಕಾರಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಮತ್ತೆ ಕಸ್ಟಡಿ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ನಾಗೇಂದ್ರ ಅವರನ್ನ ೨ನೇ ಬಾರಿಗೆ ೫ ದಿನ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು.

 

Tags: