Mysore
14
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಪೊಲೀಸರ ವಿರುದ್ಧ ಹೊಸ ಬಾಂಬ್‌ ಸಿಡಿಸಿದ ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ: ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಗೋಲಿ ಬಾರ್‌ ಮಾಡಲು ಸಂಚು ಮಾಡಲಾಗಿತ್ತು.

ಈ ಮೂಲಕ ಹೋರಾಟ ನಿಲ್ಲಿಸಲು ಜಯಮೃತ್ಯುಂಜಯ ಸ್ವಾಮೀಜಿಗಳನ್ನು ಮುಗಿಸಲು ಪ್ಲ್ಯಾನ್‌ ನಡೆದಿತ್ತು ಎಂದು ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.

ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಿದ್ರೆ ಹೋರಾಟ ನಿಲ್ಲುತ್ತೆ ಎಂದು ಗೋಲಿ ಬಾರ್‌ ಮಾಡಲು ಪ್ಲ್ಯಾನ್‌ ನಡೆದಿತ್ತು.

ಚನ್ನಮ್ಮ ವಂಶಸ್ಥರ ಮೇಲೆ ನಡೆದ ಲಾಠಿ ಚಾರ್ಜ್‌ನ್ನು ನಾವೆಲ್ಲಾ ಖಂಡಿಸಬೇಕು. ಇಲ್ಲವಾದರೆ ನಮಗೂ ಕೂಡ ಉಳಿಗಾಲವಿಲ್ಲ. ನಾವು ಪಂಚಮಸಾಲಿ ಸಮುದಾಯದ ಜೊತೆ ಗಟ್ಟಿಯಾಗಿದ್ದೇವೆ. ಸಮುದಾಯದವರ ಮೇಲಿನ ದಾಳಿಯನ್ನು ಎಲ್ಲಾ ಮಠಾಧೀಶರು ಖಂಡಿಸಬೇಕು. ಮೀಸಲಾತಿ ಅವರ ಹಕ್ಕು, ಅದನ್ನು ಅವರು ಕೇಳುತ್ತಿದ್ದಾರೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಲಾಠಿ ಚಾರ್ಜ್‌ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ತುಂಬಾ ಹಗುರವಾಗಿ ಮಾತನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಲಾಠಿ ಚಾರ್ಜ್‌ ಮಾಡುವ ಬದಲು ಮುತ್ತು ಕೊಡಬೇಕಾ ಎಂದು ಕೇಳ್ತಾರೆ. ಮುತ್ತು ಕೊಡು ಎಂದು ಕೇಳಿದ್ದಾರೆ? ಹೋರಾಟಗಾರರು ಇರುವಲ್ಲಿಗೆ ಹೋಗಿ ಅವರ ಮನವಿಯನ್ನು ಕೇಳಬೇಕಿತ್ತು ಎಂದು ಸಚಿವರ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಮುಸ್ಲಿಂ ಸಮುದಾಯದ ಮೇಲೆ ವ್ಯಾಮೋಹ ಜಾಸ್ತಿಯಾಗಿದೆ. ಕಾವಿ ಬಟ್ಟೆ ಹಾಕಿಕೊಂಡವರ ಮೇಲೆ ಅವರಿಗೆ ಅಷ್ಟ್ಯಾಕೆ ಸಿಟ್ಟು ಎಂದು ಪ್ರಶ್ನೆ ಮಾಡಿದರು.

Tags:
error: Content is protected !!