Mysore
26
clear sky

Social Media

ಶುಕ್ರವಾರ, 27 ಮಾರ್ಚ್ 2026
Light
Dark

ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್‌ ನಿಧನ

ಕೊಪ್ಪಳ: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ನಾಳೆ ಯಲಬುರ್ಗಾ ಹುಣಿಸ್ಯಾಳದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಶಿವಶರಣಪ್ಪಗೌಡ ಪಾಟೀಲ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೊದಲು ಎರಡು ಸಲ ಪರಾಭವಗೊಂಡಿದ್ದರು. ನಂತರ 1999ರಿಂದ 2004ರ ವರೆಗೆ ಶಾಸಕರಾಗಿದ್ದರು. ಅಲ್ಲದೇ ಅವರು ತಾಲ್ಲೂಕು ಬೋರ್ಡ್‌ ಅಧ್ಯಕ್ಷರಾಗಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

Tags:
error: Content is protected !!