Mysore
24
broken clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್‌

D K Suresh

ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್‌ ನೀಡಿದೆ.

ಜೂನ್.‌19ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್‌ ನೀಡಿದ್ದು, ಜೂನ್.‌23ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಡಿ.ಕೆ.ಸುರೇಶ್‌ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಜಿ ಸಂಸದ ಡಿ.ಕೆ.ಸುರೇಶ್‌ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಾಗೌಡ ಹಲವರಿಗೆ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚನೆ ಮಾಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಆರೋಪಿ ಐಶ್ವರ್ಯಾ ಗೌಡ ಮನೆ ಮೇಲೆ ದಾಳಿ ನಡೆಸಿ ಅವಳನ್ನು ವಶಕ್ಕೆ ಪಡೆದಿದ್ದರು.

Tags:
error: Content is protected !!