Mysore
24
overcast clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

It is not true that the government has no money: Former MP D.K. Suresh

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.

ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಖಾಲಿಟ್ರಂಕ್‌ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಡಿ.ಕೆ.ಸುರೇಶ್‌ ಕೆಂಡಾಮಂಡಲರಾಗಿದ್ದಾರೆ.

ತೇಜಸ್ವಿ ಸೂರ್ಯ ಖಾಲಿ ಟ್ರಂಕ್‌ ಯಾಕೆ ಹಿಡಿದುಕೊಂಡಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯಕ್ಕೆ ಎಷ್ಟು ಕೊಟ್ಟಿದ್ದಾರೆ. ಬೆಂಗಳೂರು ಕನ್ನಡಿಗರಿಗೆ ಖಾಲಿ ಡಬ್ಬ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ತೇಜಸ್ವಿ ಸೂರ್ಯ ಅವರ ಬದ್ಧತೆ ದೆಹಲಿಯಲ್ಲಿ ಪ್ರದರ್ಶನ ಮಾಡಲಿ. ಪ್ರಧಾನಿ ನರೇಂದ್ರ ಮೋದಿ ಮುಂದೆ ತೇಜಸ್ವಿ ಸೂರ್ಯ ಎದೆಗಾರಿಕೆ ತೋರಿಸಲಿ ಎಂದು ಸವಾಲು ಹಾಕಿದರು.

 

Tags:
error: Content is protected !!