ಬೆಂಗಳೂರು: ಕೇಂದ್ರ ಸರ್ಕಾರ ಉತ್ತರ ಪ್ರದೇಶಕ್ಕೆ 30 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ ಕೇವಲ 6 ಸಾವಿರ ಕೋಟಿ ನೀಡಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರ ಶುಕ್ರವಾರ ರಾಜ್ಯಕ್ಕೆ ಬರಬೇಕಾಗಿದ್ದ 6 ಸಾವಿರ ಕೋಟಿ ತೆರಿಗೆಯನ್ನು ಹಂಚಿಕೆ ಮಾಡಿದೆ. ಇದರ ಜೊತೆಗೆ ಅನೇಕ ರಾಜ್ಯಗಳಿಗೆ ತೆರಿಗೆ ಹಂಚಿಕೆ ಮಾಡಿದ್ದು, ಉತ್ತರ ಪ್ರದೇಶಕ್ಕೆ ಅತೀ ಹೆಚ್ಚು ತೆರಿಗೆ ನೀಡಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಕಿಡಿಕಾರುತ್ತಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ಉತ್ತರ ಪ್ರದೇಶಕ್ಕೆ 30 ಸಾವಿರ ಕೋಟಿ, ತಮಿಳುನಾಡಿಗೆ 7 ಸಾವಿರ ಕೋಟಿ, ಚಿಕ್ಕ ರಾಜ್ಯವಾದ ಆಂಧ್ರಪ್ರದೇಶಕ್ಕೆ 7 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡಿದೆ. ಆದರೆ ಕರ್ನಾಟಕಕ್ಕೆ ಕೇವಲ 6 ಸಾವಿರ ಕೋಟಿ ರೂ ಕೊಟ್ಟು ಅನ್ಯಾಯ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಈ ತಾರತಮ್ಯದ ಬಗ್ಗೆ ಧ್ವನಿ ಎತ್ತಬೇಕು ಎಂದು ಕಿಡಿಕಾರಿದರು.
ಇನ್ನು ಮುಂದಿನ ಅವಧಿಗೆ ಡಿಕೆಶಿ ಸಿಎಂ ಆಗಲಿ ಎಂಬ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ಕುರಿತು ಮಾತನಾಡಿದ ಅವರು, ಕೆ.ಎನ್.ರಾಜಣ್ಣ ಏನು ಮಾತನಾಡಿದ್ದಾರೋ ಗೊತ್ತಿಲ್ಲ. ರಾಜಣ್ಣ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನೇ ಕೇಳಬೇಕು. ರಾಜಣ್ಣ ಏನನ್ನೇ ಆದರೂ ಹೇಳಬೇಕಾದರೆ ಸಿಎಂ ಮುಂದೆ ಹಾಗೂ ಹೈಕಮಾಂಡ್ ಮುಂದೆ ಹೇಳಲಿ ಎಂದು ಟಾಂಗ್ ಕೊಟ್ಟರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…