ಬೆಂಗಳೂರು: ಅತ್ಯಾಚಾರ ಹಾಗೂ ಆಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾರೆ.
ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಕೆಲಸ ಮಾಡುತ್ತಿದ್ದಾರೆ. ಜೈಲಿನಲ್ಲಿರುವ ಕೈದಿಗಳು, ವಿಚಾರಣಾಧೀನ ಕೈದಿಗಳು ಜೈಲಿನ ಲೈಬ್ರರಿಗೆ ಬಂದು ಪುಸ್ತಕಗಳನ್ನು ಪಡೆದರೆ ಅವುಗಳನ್ನು ನೋಂದಣಿ ಮಾಡಿಕೊಡುವ ಕೆಲಸ ಇದಾಗಿದೆ.
ಇದನ್ನು ಓದಿ: ಧರ್ಮಸ್ಥಳ ಪ್ರಕರಣ : ಮಹಿಳಾ ಸಂಘಟನೆಗಳಿಂದ ಸೋನಿಯಾಗೆ ಪತ್ರ
ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿರುವ ಪ್ರಜ್ವಲ್ ರೇವಣ್ಣಗೆ ದಿನಗೂಲಿಯಂತೆ ಸಂಬಳವನ್ನೂ ಸಹ ನೀಡಲಾಗುತ್ತದೆ. ಕೆಲಸಕ್ಕೆ ಬಾರದಿದ್ದಾಗ ಸಂಬಳ ಕಟ್ ಮಾಡಲಾಗುತ್ತದೆ. ಒಂದು ದಿನಕ್ಕೆ 522 ರೂಪಾಯಿ ಫಿಕ್ಸ್ ಮಾಡಲಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಕೋರ್ಟ್ ದೋಷಿ ಎಂದು ತೀರ್ಪು ನೀಡಿತ್ತು. ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದ ಈ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾಗಿದ್ದು, ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿತ್ತು. ಅತ್ಯಾಚಾರ ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೀವಾವಧಿ ಶಿಕ್ಷೆ ನೀಡಿ ಕೋರ್ಟ್ ಆದೇಶ ಹೊರಡಿಸಿತ್ತು.





