ರಾಜ್ಯ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ.

ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್‍ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‍ಪಿ ಸುಮನ್ ಡಿ ಪನ್ನೇಕರ್, ಎಸ್‍ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್‌ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಸರ್ಕಾರದಿಂದ ವಿವಿಧ ದರ್ಜೆ ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಮಂಜೂರು ಮಾಡಲಾಗಿದೆ. ಒಟ್ಟಾರೆ 35 ಲಕ್ಷ ರೂ. ಬಹುಮಾನವನ್ನು ಪೊಲೀಸ್ ಇಲಾಖೆ ಘೋಷಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಂದ ದೂರವಿರಿ : ಕಮಿಷನರ್‌ ಸೀಮಾ ಲಾಟ್ಕರ್‌

ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…

15 mins ago

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

50 mins ago

ಇನ್ನೂ ಯುದ್ಧ ಮುಗಿದಿಲ್ಲ ; ಇಸ್ರೇಲ್

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…

1 hour ago

ಬೇಸಿಗೆ ಬಿಸಿಲು | 183 ಗ್ರಾಮಗಳಲ್ಲಿ ನೀರಿಗೆ ಕೊರತೆ ; ಅಗತ್ಯ ವ್ಯವಸ್ಥೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…

2 hours ago

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

2 hours ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

3 hours ago