ಬಳ್ಳಾರಿ: ಕ್ರಿಮಿನಲ್ ಬ್ಯಾಗ್ರೌಂಡ್ ಬಗ್ಗೆ ಸಾಚಾರಂತೆ ಮಾತನಾಡುತ್ತಿರುವ ಆ ವ್ಯಕ್ತಿಯ ದಾಖಲೆಗಳು ನನ್ನ ಬಳಿಯಿದೆ. ಸಮಯ ಬಂದಾಗ ಸಾಕ್ಷಿತ ಸಮೇತ ಜನರ ಮುಂದೆ ಬಿಚ್ಚಿಡುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಅವರು ಜನಾರ್ಧನ ರೆಡ್ಡಿ ವಿರುದ್ಧ ಕಿಡಿಕಾರಿದರು.
ಸತೀಶ್ ಜಾರಕಿಹೊಳಿಯನ್ನು ಮಣಿಸಲು ಡಿಕೆಶಿಯಿಂದ ಶ್ರೀರಾಮುಲು ಆಪರೇಷನ್ ಎಂದು ಶಾಸಕ ಜನಾರ್ಧನ ರೆಡ್ಡಿ ಹೊಸ ಬಾಂಬ್ ಸಿಡಿಸಿದ ಬೆನ್ನಲ್ಲೇ ಬಳ್ಳಾರಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಜನಾರ್ಧನ ರೆಡ್ಡಿ ಆರೋಪಗಳಿಗೆ ಕೌಂಟರ್ ಮೇಲೆ ಕೌಂಟರ್ ಕೊಟ್ಟಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮಟ್ಟ ಹಾಕೋದಕ್ಕೆ ನಾನ್ಯಾರು? ಕಾಂಗ್ರೆಸ್‌ನಲ್ಲೂ ವಾಲ್ಮೀಕಿ ಸಮುದಾಯದ ನಾಯಕರಿದ್ದಾರೆ. ನಾನು ಸೋತಿದ್ದರೂ ನನ್ನ ಪಾರ್ಟಿಯಲ್ಲಿ ಪ್ರಬಲವಾಗಿದ್ದೇನೆ. ಸತೀಶ್ ಅವರನ್ನು ತೊಂದರೆ ಕೊಡೋದಕ್ಕೆ ಡಿಕೆಶಿ ನನ್ನ ಬಳಕೆ ಮಾಡಿಕೊಳ್ತಾರೆ ಅನ್ನೋದೆಲ್ಲಾ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಯಾವುದೇ ಕಳಂಕ ಇಲ್ಲದೇ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ಎರಡು ಬಾರಿ ಸೋತಿರುವ ನೋವಿನಲ್ಲಿರುವ ನನಗೆ ಗಾಯದ ಮೇಲೆ ಬರೆ ಎಳೆಯಬೇಡಿ ಎಂದು ಕಿಡಿಕಾರಿದರು.
ಇನ್ನು ಬಿಜೆಪಿ ಪಕ್ಷ ಬಿಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ಕಾರಣಕ್ಕೂ ಪಕ್ಷ ತೊರೆಯಲ್ಲ. ಪ್ರಧಾನಿ ಹಾಗೂ ವರಿಷ್ಠರನ್ನು ಭೇಟಿ ಮಾಡ್ತೀನಿ ಎಂದು ಹೇಳಿದೆ. ಇದೆಲ್ಲವನ್ನು ಕೇಂದ್ರ ನಾಯಕರಿಗೆ ಹೇಳುತ್ತೇನೆ. ಸುಳ್ಳಿನ ಮುಂದೆ ಸತ್ಯ ಸೋಲುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…