ಬೆಂಗಳೂರು: ನನ್ನ ಕೆಲಸಕ್ಕೆ ಸರ್ಟಿಫಿಕೇಟ್ ಕೊಡುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಸೋತಿದ್ದೇವೆ. ಆದರೆ ಆತಂಕಪಡುವ ಅಗತ್ಯವಿಲ್ಲ. ನನ್ನ ಕೆಲಸಕ್ಕೆ ಕಾಂಗ್ರೆಸ್ ನಾಯಕರು ಸರ್ಟಿಫಿಕೇಟ್ ಕೊಡುವ ಅಗತ್ಯವಿಲ್ಲ. ನಮ್ಮನ್ನು ಯಾರು ಸೋಲಿಸಿದ್ದಾರೋ ಆ ಪುಣ್ಯಾತ್ಮರೇ ಮುಂದೆ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ದೇವೇಗೌಡರ ಕುಟುಂಬವನ್ನು ಮುಗಿಸುತ್ತೇವೆ ಎಂದು ಪದೇ ಪದೇ ಹೇಳುತ್ತಾ ಬರುತ್ತಿದ್ದರು. ಆದರೆ ಈಗ ನಮ್ಮನ್ನು ಮುಗಿಸಲು ಅವರಿಗೆ ಆಯ್ತಾ? ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು ಎಂದುಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಇನ್ನು ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ಬಗ್ಗೆ ಮಾತನಾಡಿದ ಅವರು, ಎನ್‌ಡಿಎ ಮೈತ್ರಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದು ಮುಂದುವರೆಯುತ್ತದೆ ಎಂದು ಸ್ಪಷ್ಟಪಡಿಸಿದರು.





