Mysore
23
overcast clouds

Social Media

ಭಾನುವಾರ, 22 ಜೂನ್ 2025
Light
Dark

ಪೆನ್‌ಡ್ರೈವ್‌ ಪ್ರಕರಣ: ಎಚ್‌ಡಿ ದೇವೇಗೌಡರ ಮೊದಲ ಪ್ರತಿಕ್ರಿಯೆ ಇದು

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ 91ನೇ ಹುಟ್ಟುಹಬ್ಬದ ದಿನದಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ವಿರುದ್ಧ ಕ್ರಮದ ಬಗ್ಗೆ ನಮಗೆ ತಕರಾರಿಲ್ಲ. ಅವರು ಹೊರಗಡೆ ಹೋಗಿದ್ದಾರೆ. ಆದರೆ, ರೇವಣ್ಣ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಜನರಿಗೆ ಸತ್ಯ ಗೊತ್ತಿದೆ. ರೇವಣ್ಣ ಪ್ರಕರಣ ಸದ್ಯ ಕೋರ್ಟಿನಲ್ಲಿ ನಡೆಯುತ್ತಿದ್ದು, ಈ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಈ ಘಟನೆ ವಿಚಾರವಾಗಿ ಎಚ್‌ಡಿ ಕುಮಾರಸ್ವಾಮಿ ಅವರು ಎಲ್ಲವನ್ನು ಮಾತನಾಡಿದ್ದಾರೆ. ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ. ಇದರಲ್ಲಿ ಅನೇಕ ಜನರ ಕೈವಾಡವಿದೆ. ನಾನು ಯಾರ ಹೆಸರನ್ನು ಹೇಳಲು ಬಯಸುವುದಿಲ್ಲ. ಅನ್ಯಾಯವಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಘಟನೆ ಬಗ್ಗೆ ವಿಶ್ಲೇಷನೆ ನೀಡುವುದಿಲ್ಲ ಎಂದು ಮೌನ ಮುರಿದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ವಕೀಲ ದೇವರಾಜೇಗೌಡ ನೂರು ಕೋಟಿ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ನಾನು ಮಾತನಾಡುವುದಿಲ್ಲ. ದೇವರಾಜೇಗೌಡ ಹೇಳಿರುವುದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಯಾವುದೇ ವಿಚಾರ ಬಂದರು ಎಲ್ಲದಕ್ಕೂ ಹೋರಾಟ ಮಾಡುವ ಛಲವಿದೆ. ಈ ಎಲ್ಲದಕ್ಕೂ ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ನಿಮ್ಮನ್ನೆಲ್ಲಾ ಭೇಟಿಯಾಗುತ್ತೇನೆ. ಅಲ್ಲಿಯವರೆಗೆ ಯಾರನ್ನು ಭೇಟಿಯಾಗುವುದಿಲ್ಲ ಎಂದು ಖಡಕ್‌ ಆಗಿ ಉತ್ತರಿಸಿದ್ದಾರೆ.

 

Tags:
error: Content is protected !!