ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ತಮ್ಮ 91ನೇ ಹುಟ್ಟುಹಬ್ಬದ ದಿನದಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮದ ಬಗ್ಗೆ ನಮಗೆ ತಕರಾರಿಲ್ಲ. ಅವರು ಹೊರಗಡೆ ಹೋಗಿದ್ದಾರೆ. ಆದರೆ, ರೇವಣ್ಣ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಜನರಿಗೆ ಸತ್ಯ ಗೊತ್ತಿದೆ. ರೇವಣ್ಣ ಪ್ರಕರಣ ಸದ್ಯ ಕೋರ್ಟಿನಲ್ಲಿ ನಡೆಯುತ್ತಿದ್ದು, ಈ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಮಾಜಿ ಪ್ರಧಾನಿಗಳು ಹೇಳಿದರು.
ಈ ಘಟನೆ ವಿಚಾರವಾಗಿ ಎಚ್‌ಡಿ ಕುಮಾರಸ್ವಾಮಿ ಅವರು ಎಲ್ಲವನ್ನು ಮಾತನಾಡಿದ್ದಾರೆ. ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ. ಇದರಲ್ಲಿ ಅನೇಕ ಜನರ ಕೈವಾಡವಿದೆ. ನಾನು ಯಾರ ಹೆಸರನ್ನು ಹೇಳಲು ಬಯಸುವುದಿಲ್ಲ. ಅನ್ಯಾಯವಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಘಟನೆ ಬಗ್ಗೆ ವಿಶ್ಲೇಷನೆ ನೀಡುವುದಿಲ್ಲ ಎಂದು ಮೌನ ಮುರಿದಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಕೀಲ ದೇವರಾಜೇಗೌಡ ನೂರು ಕೋಟಿ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ನಾನು ಮಾತನಾಡುವುದಿಲ್ಲ. ದೇವರಾಜೇಗೌಡ ಹೇಳಿರುವುದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಯಾವುದೇ ವಿಚಾರ ಬಂದರು ಎಲ್ಲದಕ್ಕೂ ಹೋರಾಟ ಮಾಡುವ ಛಲವಿದೆ. ಈ ಎಲ್ಲದಕ್ಕೂ ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ನಿಮ್ಮನ್ನೆಲ್ಲಾ ಭೇಟಿಯಾಗುತ್ತೇನೆ. ಅಲ್ಲಿಯವರೆಗೆ ಯಾರನ್ನು ಭೇಟಿಯಾಗುವುದಿಲ್ಲ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.
ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ, ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮುಂದಾಗಿರುವ ಸಂತೋಷ್ ಸಂಬಳದ ಹಣವೇ ವಿನಿಯೋಗ; ಬಿಎಂಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಸೇವೆ…
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…