Mysore
31
few clouds

Social Media

ಭಾನುವಾರ, 15 ಮಾರ್ಚ್ 2026
Light
Dark

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಮಣಿಪಾಲ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

ಚಳಿ, ಜ್ವರ, ಸೋಂಕಿನ ಕಾರಣದಿಂದ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಕಳೆದ ಒಂದು ವಾರದಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರು ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿತ್ತು. ವಾರ್ಡ್‌ನಲ್ಲಿಯೂ ಚಿಕಿತ್ಸೆ ಮುಂದುವರಿಸಲಾಗಿತ್ತು.

ಇದೀಗ ಎಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

Tags:
error: Content is protected !!