Mysore
26
haze

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಮೋದಿ, ಅಮಿತ್ ಶಾ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಿಡಿ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚರಣೆ ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ಳುತ್ತಿದೆ ಎಂದರೆ ದೇಶದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ. ಅಧಿವೇಶನದಲ್ಲಿ ‌ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ. ಅವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ತಪ್ಪು ಮಾಡುತ್ತಿದೆ ಎಂದು ಆರೋಪಿಸಿದರು.

ಅಟಲ್ ಜೀ ಅವರು ವಿರೋಧ ಪಕ್ಷದಲ್ಲಿದ್ದಾಗ ನಾನು ಅವರ ಭಾಷಣ ಕಾರಿನಲ್ಲಿ ಹೋಗುವಾಗ ಕೇಳುತ್ತಿದ್ದೆ. ಅವರ ಭಾಷಣ ಕೇಳುತ್ತಾ ನಾನು ವಿರೋಧ ಪಕ್ಷದ ನಾಯಕನಾದಾಗ ಹೇಗೆ ಮಾತನಾಡಬೇಕು ಎಂದು ತಿಳಿದುಕೊಳ್ಳುತ್ತಿದ್ದೆ. ಅವರು ವಿರೋಧ ಪಕ್ಷದ ನಾಯಕರಾಗಿ ಬಹಳ ಗೌರವಯುತವಾಗಿ ನಡೆದುಕೊಳ್ಳುತ್ತಿದ್ದರು. ಅವರು ಎಲ್ಲರಿಗೂ ಮಾದರಿಯಾಗಿದ್ದರು ಎಂದು ದೇವೇಗೌಡರು ಆ ಸಂದರ್ಭವನ್ನು ನೆನಪು ಮಾಡಿಕೊಂಡರು.

ನಾನು ಕನಸು ಮನಸ್ಸಿನಲ್ಲಿಯೂ ಪ್ರಧಾನಿ ಆಗುತ್ತೇನೆ ಎಂದು ಆಲೋಚನೆ ಮಾಡಿರಲಿಲ್ಲ. ಅವರು ಬರೀ 13 ದಿನ ಅಧಿಕಾರದಲ್ಲಿದ್ದರು. ಕಾಕತಾಳೀಯ ಎಂದರೆ, ಅವರ ನಂತರ 13 ಪಕ್ಷಗಳು ಸೇರಿ ಸಂಯುಕ್ತ ರಂಗ ರಚನೆ ಮಾಡಿ ನನ್ನನ್ನು ಪ್ರಧಾನಿ ಮಾಡಿದರು. ಆಗ ಏನೆಲ್ಲಾ ನಡೆಯಿತು ಎಂದು ನಾನು ಹೇಳಲು ಹೋಗಲ್ಲ. ನಾನು ಬರೀ 320 ದಿನ ಪ್ರಧಾನಿ ಆಗಿದ್ದೆ ಅಷ್ಟೇ ಎಂದು ದೇವೇಗೌಡರು ಹೇಳಿದರು.

Tags:
error: Content is protected !!