ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚರಣೆ ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ಳುತ್ತಿದೆ ಎಂದರೆ ದೇಶದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ. ಅಧಿವೇಶನದಲ್ಲಿ ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ. ಅವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ತಪ್ಪು ಮಾಡುತ್ತಿದೆ ಎಂದು ಆರೋಪಿಸಿದರು.
ಅಟಲ್ ಜೀ ಅವರು ವಿರೋಧ ಪಕ್ಷದಲ್ಲಿದ್ದಾಗ ನಾನು ಅವರ ಭಾಷಣ ಕಾರಿನಲ್ಲಿ ಹೋಗುವಾಗ ಕೇಳುತ್ತಿದ್ದೆ. ಅವರ ಭಾಷಣ ಕೇಳುತ್ತಾ ನಾನು ವಿರೋಧ ಪಕ್ಷದ ನಾಯಕನಾದಾಗ ಹೇಗೆ ಮಾತನಾಡಬೇಕು ಎಂದು ತಿಳಿದುಕೊಳ್ಳುತ್ತಿದ್ದೆ. ಅವರು ವಿರೋಧ ಪಕ್ಷದ ನಾಯಕರಾಗಿ ಬಹಳ ಗೌರವಯುತವಾಗಿ ನಡೆದುಕೊಳ್ಳುತ್ತಿದ್ದರು. ಅವರು ಎಲ್ಲರಿಗೂ ಮಾದರಿಯಾಗಿದ್ದರು ಎಂದು ದೇವೇಗೌಡರು ಆ ಸಂದರ್ಭವನ್ನು ನೆನಪು ಮಾಡಿಕೊಂಡರು.
ನಾನು ಕನಸು ಮನಸ್ಸಿನಲ್ಲಿಯೂ ಪ್ರಧಾನಿ ಆಗುತ್ತೇನೆ ಎಂದು ಆಲೋಚನೆ ಮಾಡಿರಲಿಲ್ಲ. ಅವರು ಬರೀ 13 ದಿನ ಅಧಿಕಾರದಲ್ಲಿದ್ದರು. ಕಾಕತಾಳೀಯ ಎಂದರೆ, ಅವರ ನಂತರ 13 ಪಕ್ಷಗಳು ಸೇರಿ ಸಂಯುಕ್ತ ರಂಗ ರಚನೆ ಮಾಡಿ ನನ್ನನ್ನು ಪ್ರಧಾನಿ ಮಾಡಿದರು. ಆಗ ಏನೆಲ್ಲಾ ನಡೆಯಿತು ಎಂದು ನಾನು ಹೇಳಲು ಹೋಗಲ್ಲ. ನಾನು ಬರೀ 320 ದಿನ ಪ್ರಧಾನಿ ಆಗಿದ್ದೆ ಅಷ್ಟೇ ಎಂದು ದೇವೇಗೌಡರು ಹೇಳಿದರು.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…