ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಕಳೆದ 4 ದಿನಗಳ ಹಿಂದಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 4:50 ರ ಸುಮಾರಿಗೆ ವಿಧಿವಶರಾಗಿದ್ದಾರೆ.
ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರು 1954 ಮೇ 25 ರಂದು ಹೆಚ್.ಡಿ ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ 6 ಜನ ಮಕ್ಕಳಿದ್ದಾರೆ. ಸದ್ಯ ಚೆನ್ನಮ್ಮ ಅವರು ಇಹಲೋಕ ತ್ಯಜಿಸಿದ್ದು, ಪತಿ ಹೆಚ್.ಡಿ ದೇವೇಗೌಡ, ಪುತ್ರ ಹೆಚ್.ಡಿ ಕುಮಾರಸ್ವಾಮಿ, ಹೆಚ್.ಡಿ ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಹಾಗೂ ಮಗಳು ಹೆಚ್.ಡಿ. ಅನುಸೂಯ ಅವರನ್ನ ಅಗಲಿದ್ದಾರೆ. ಚೆನ್ನಮ್ಮ ಅವರ ನಿಧನಕ್ಕೆ ಪತಿ ಹೆಚ್.ಡಿ ದೇವೇಗೌಡ, ಪುತ್ರ ಹೆಚ್.ಡಿ ಕುಮಾರಸ್ವಾಮಿ ಸೇರಿ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಮಣಿಪಾಲ ಆಸ್ಪತ್ರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕೂಡ ಭೆಟಿ ನೀಡಿದ್ದಾರೆ. ಸಂಸದ ಡಾ. ಮಂಜುನಾಥ್ ಕೂಡ ಆಸ್ಪತ್ರೆಗೆ ಆಗಮಿಸಿದ್ದಾರೆ.
ಆಸ್ಪತ್ರೆ ಪ್ರಕ್ರಿಯೆಗಳು ಮುಗಿದ ಬಳಿಕ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಪಾರ್ಥೀವ ಶರೀರ ತೆಗೆದುಕೊಂಡು ಹೋಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…