ರಾಜ್ಯ

ಮಾಜಿ ಪ್ರಧಾನಿ ಎಚ್‌ಡಿಡಿ, ಬೊಮ್ಮಾಯಿ ಆಶೀರ್ವಾದ ಪಡೆದ ಬಿವೈ ವಿಜಯೇಂದ್ರ

ಬೆಂಗಳೂರು : ಬಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು, ಮಾಜಿ ಪ್ರಧಾನಿ ಎಚ್‌.ಡಿ ದೇವೆಗೌಡರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಮೊದಲಿಗೆ ಆರ್‌ಟಿ ನಗರದದಲ್ಲಿರುವ ಬೊಮ್ಮಾಯಿ ಅವರ ಮನೆಗೆ ತೆರಳಿ ಭೇಟಿ ಮಾಡಿ, ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ 15 ರಂದು ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತೇನೆ. ಚುನಾವಣಾ ಕಾರ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಜೆಪಿ ನಡ್ಡಾ ನಿರತರಾಗಿದ್ದಾರೆ. ಹಾಗಾಗಿ ನ.23ರಂದು ದೆಹಲಿಗೆ ತೆರಳಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತು ಚರ್ಚೆ ಮಾಡುತ್ತೇನೆಂದು ತಿಳಿಸಿದರು.

ಇದರ ಬೆನ್ನಲ್ಲೇ ಜೆಡಿಎಸ್‌ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ದೀಪಾವಳಿ ಶುಭಾಷಯ ಕೋರಿ, ಆಶೀರ್ವಾದ ಪಡೆದಿದ್ದೇನೆ ಎಂದರು. ದೊಡ್ಡ ರಾಷ್ಟ್ರೀಯ ಪಕ್ಷವೊಂದು ಚಿಕ್ಕ ವಯಸ್ಸಿಗೆ ದೊಡ್ಡ ಜವಾಬ್ದಾರಿ ಕೊಟ್ಟಿರುವ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ಬಿಎಸ್‌ ಯಡಿಯೂರಪ್ಪ ಅವರ ರೀತಿಯಲ್ಲಿ ಪಕ್ಷ ಸಂಘಟನೆಗೆ ಶ್ರಮ ವಹಿಸಿ ಯಶಸ್ವಿಯಾಗುವಂತೆ ಹರಸಿದ್ದಾರೆ. ಅವರ ಭೇಟಿಯಿಂದ ನನಗೆ ಸಂತೋಷವಾಗಿದೆ. ಅವರ ಚಿಂತನೆಗಳು ನಮಗೆ ಶಕ್ತಿ ನೀಡುತ್ತವೆ. ರಾಜ್ಯದಲ್ಲಿ ಹೋರಾಟ ಎಂಬ ಮಾತು ಬಂದಾಗ ದೇವೇಗೌಡರು ಹಾಗೂ ಯಡಿಯೂರಪ್ಪ ಅವರು ನೆನಪಾಗುತ್ತಾರೆ ಎಂದು ಸ್ಮರಿಸಿದರು.

ಪಕ್ಷ ಹಿತದೃಷ್ಠಿಯಿಂದ ಜೆಡಿಎಸ್‌ ವರಿಷ್ಠರು ಹಾಗೂ ಎಚ್‌ಡಿ ಕುಮಾರಸ್ವಾಮಿ ಅವರ ಸಲಹೆಗಳನ್ನು ಸ್ವೀಕರಿಸುತ್ತೇವೆ ಎಂದರು.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

31 mins ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

35 mins ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

40 mins ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

59 mins ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

1 hour ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago