ಬೆಂಗಳೂರು: ಮಾರಾಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಬಿಗ್‌ಬಾಸ್ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡಗೆ 24ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ರಜತ್ ಮತ್ತು ವಿನಯ್‌ಗೌಡ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ವೇಳೆ ಬಸವೇಶ್ವರನಗರ ಠಾಣಾ ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು. ನಂತರ ಕೋರ್ಟ್ ಪೊಲೀಸರ ಕಸ್ಟಡಿಗೆ ನೀಡಿತ್ತು.
ಈ ಮಧ್ಯೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ 10 ಸಾವಿರ ಶ್ಯೂರಿಟಿ ಒದಗಿಸುವಂತೆ ಸೂಚಿಸಿ ಇಬ್ಬರಿಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಸಧ್ಯ ವಿನಯ್ ಹಾಗೂ ರಜತ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ಆದೇಶ ಪ್ರತಿ ಜೈಲಾಧಿಕಾರಿಗಳಿಗೆ ತಲುಪಿದ ನಂತರ ಬಿಡುಗಡೆಯಾಗುವ ಸಾಧ್ಯತೆಯಿದೆ.