Mysore
28
light rain

Social Media

ಬುಧವಾರ, 25 ಜೂನ್ 2025
Light
Dark

ಬೇಬಿ ಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ವಿರೋಧಿಸಿ ರೈತರಿಂದ ಪ್ರತಿಭಟನೆ

ಮಂಡ್ಯ : ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೃಂದಾವನ ಗೇಟ್ ಬಳಿ ರೈತಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್​​ ಗೆ ನಡೆಯಲಿದ್ದು, ರಾಜ್ಯ ಸರ್ಕಾರ ಅನುಮತಿ ನೀಡಿದ್ದನ್ನು ವಿರೋಧಿಸಿ, ಬ್ಲಾಸ್ಟ್‌ ಗೆ ನೀಡಿರುವ ಅನುಮತಿ ಹಿಂಪಡೆಯುವಂತೆ ಕೋರಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಕೆಆರ್‌ಎಸ್‌ ಡ್ಯಾಂನ ಬೃಂದಾವನ ಗೇಟ್ ಬಳಿ ರೈತ ಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೃಂದಾವನಕ್ಕೆ ನುಗ್ಗಲು ಯತ್ನಿಸಿದರು. ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ರೈತ ಸಂಘಟನೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.

ಟ್ರಯಲ್ ಬ್ಲಾಸ್ಟ್ ಗೆ ಆಗಮಿಸಿರುವ ತಜ್ಞರನ್ನು ವಾಪಸ್ ಕಳುಹಿಸಬೇಕು. ಈ ಟ್ರಯಲ್​ ಬ್ಲಾಸ್ಟ್​​ ಮಾಡುವಾಗ ಕಡಿಮೆ ಸ್ಫೋಟಕ ಬಳಸಿ ಬ್ಲಾಸ್ಟ್​​ ಮಾಡಿ ಕೆಆರ್‌ಎಸ್​ ಗೆ ತೊಂದರೆ ಆಗಲ್ಲ ಎಂದು ವರದಿ ನೀಡುತ್ತಾರೆ. ಬಳಿಕ ಬೆಟ್ಟದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗಿ ಅಪಾರ ಪ್ರಮಾಣದ ಸ್ಫೋಟಕ ಬಳಸಿ ಬ್ಲಾಸ್ಟ್​ ಮಾಡುತ್ತಾರೆ. ಇದರಿಂದ ಕೆಆರ್‌​ಎಸ್​ ಗೆ ಹಾನಿಯಾಗುತ್ತದೆ. ಹೀಗಾಗಿ ಟ್ರಯಲ್​ ಬ್ಲಾಸ್ಟ್​ ಮಾಡಬಾರದು ಎಂದು ರೈತ ಸಂಘ ಹಾಗೂ ಬಿಜೆಪಿ ಆಗ್ರಹಿಸಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!