ಮಂಡ್ಯ : ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೃಂದಾವನ ಗೇಟ್ ಬಳಿ ರೈತಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್ ಗೆ ನಡೆಯಲಿದ್ದು, ರಾಜ್ಯ ಸರ್ಕಾರ ಅನುಮತಿ ನೀಡಿದ್ದನ್ನು ವಿರೋಧಿಸಿ, ಬ್ಲಾಸ್ಟ್ ಗೆ ನೀಡಿರುವ ಅನುಮತಿ ಹಿಂಪಡೆಯುವಂತೆ ಕೋರಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ಕೆಆರ್‌ಎಸ್ ಡ್ಯಾಂನ ಬೃಂದಾವನ ಗೇಟ್ ಬಳಿ ರೈತ ಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೃಂದಾವನಕ್ಕೆ ನುಗ್ಗಲು ಯತ್ನಿಸಿದರು. ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ರೈತ ಸಂಘಟನೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ಟ್ರಯಲ್ ಬ್ಲಾಸ್ಟ್ ಗೆ ಆಗಮಿಸಿರುವ ತಜ್ಞರನ್ನು ವಾಪಸ್ ಕಳುಹಿಸಬೇಕು. ಈ ಟ್ರಯಲ್ ಬ್ಲಾಸ್ಟ್ ಮಾಡುವಾಗ ಕಡಿಮೆ ಸ್ಫೋಟಕ ಬಳಸಿ ಬ್ಲಾಸ್ಟ್ ಮಾಡಿ ಕೆಆರ್‌ಎಸ್ ಗೆ ತೊಂದರೆ ಆಗಲ್ಲ ಎಂದು ವರದಿ ನೀಡುತ್ತಾರೆ. ಬಳಿಕ ಬೆಟ್ಟದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗಿ ಅಪಾರ ಪ್ರಮಾಣದ ಸ್ಫೋಟಕ ಬಳಸಿ ಬ್ಲಾಸ್ಟ್ ಮಾಡುತ್ತಾರೆ. ಇದರಿಂದ ಕೆಆರ್‌ಎಸ್ ಗೆ ಹಾನಿಯಾಗುತ್ತದೆ. ಹೀಗಾಗಿ ಟ್ರಯಲ್ ಬ್ಲಾಸ್ಟ್ ಮಾಡಬಾರದು ಎಂದು ರೈತ ಸಂಘ ಹಾಗೂ ಬಿಜೆಪಿ ಆಗ್ರಹಿಸಿದೆ.
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…
ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ…
ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…
ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…