ರಾಜ್ಯ

ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನು ರೂಪಿಸಿ: ಸರ್ಕಾರಕ್ಕೆ ಜೆಡಿಎಸ್‌ ಆಗ್ರಹ

ಬೆಂಗಳೂರು: ಹೆಚ್ಚುತ್ತಿರುವ ವಲಸಿಗರ ಹಾವಳಿ, ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನನ್ನು ಅತ್ಯವಶ್ಯಕವಾಗಿ ರೂಪಿಸಬೇಕು ಎಂದು ಜೆಡಿಎಸ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ನಮ್ಮ ನೆಲದಲ್ಲೇ ದಿನವೂ ಕನ್ನಡಿಗರ ಮೇಲೆ ವಲಸಿಗರಿಂದ ನಡೆಯುತ್ತಿರುವ ದೌರ್ಜನ್ಯದ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ.

ಇದನ್ನೂ ಓದಿ:- ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ

ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕದಲ್ಲಿ ಉತ್ತರದ ರಾಜ್ಯಗಳ ವಲಸಿಗರ ದೌರ್ಜನ್ಯ ಖಂಡನೀಯ. ಬೆಂಗಳೂರಿನ ಸಿ.ವಿ.ರಾಮನ್ ನಗರದಲ್ಲಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಎಂಬಾತ ರಸ್ತೆಯಲ್ಲೇ ಕ್ಷುಲ್ಲಕ ಕಾರಣಕ್ಕೆ ಕನ್ನಡಿಗ ಟೆಕ್ಕಿ ವಿನಯ್ ಕುಮಾರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ:- ಗ್ರಾಮ ಮಟ್ಟದಲ್ಲಿ ಜಾತಿಗಣತಿ ಅಪ್‌ಡೇಟ್‌ ಮಾಡಬೇಕು: ಮಾಜಿ ಸಂಸದ ಡಿ.ಕೆ.ಸುರೇಶ್‌ ಆಗ್ರಹ 

ಭಾಷಾ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೇ ಸಾರ್ವಜನಿಕವಾಗಿ ರೌಡಿಯಂತೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್‌ನನ್ನು ಶೀಘ್ರವೇ ಬಂಧಿಸಿ, ಕನ್ನಡಿಗರಿಗೆ ನ್ಯಾಯಕೊಡಿಸಿ ಎಂದು ಒತ್ತಾಯಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 mins ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

12 mins ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

14 mins ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

17 mins ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

22 mins ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

29 mins ago