ರಾಜ್ಯ

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಅವರು ಇಂದು ಬಾಗಲಕೋಟೆಯ ನವನಗರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಉಪಚುನಾವಣೆ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು ಸಮಾರಂಭ ಹಾಗೂ ಛತ್ರಪತಿ ಶಿವಾಜಿ ಹಾಗೂ ಬಸವಣ್ಣ ಅವರ ಮೂರ್ತಿಗೆ ತಲಾ 40 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಸೂಚಿಸಿರುವುದು ಚುನಾವಣಾ ಗಿಮಿಕ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜು ಏಕೆ ಮಾಡಲಿಲ್ಲ. ಇದು ಗಿಮಿಕ್ ಹೇಗಾಗುತ್ತದೆ ಎಂದರು. ಈಗಾಗಲೇ ಟೆಂಡರ್ ಕರೆದು ಏಜೆನ್ಸಿ ನಿಗದಿಯಾಗಿದೆ. ಕೆಲಸ ಪ್ರಾರಂಭವಾಗಬೇಕಿದ್ದು ಅದಕ್ಕೆ ಅಡಿಗಲ್ಲು ಹಾಕಲಾಗುತ್ತಿದೆ ಎಂದರು.

ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ ಅವರು, ಹೆಚ್.ವೈ.ಮೇಟಿ ಕುಟುಂಬದವರನ್ನೇ ಆಯ್ಕೆ ಮಾಡಲಾಗುವುದೇ ಎಂಬ ಮಾಧ್ಯಮಗಳ ಉತ್ತರ ನೀಡಿ ಅವರೂ ಒಬ್ಬ ಆಕಾಂಕ್ಷಿ ಎಂದರು.

ಉಪಚುನಾವಣೆ ಒಂದು ವಾರದೊಳಗೆ ಘೋಷಣೆಯಾಗಬಹುದು ಎಂದು ಹೇಳಿದ ಅವರು, ಯಾರಾದರೂ ಆಕಾಂಕ್ಷಿಯಾಗಬಹುದು. ಒಂದೇ ಕುಟುಂಬದಿಂದ ಎಷ್ಟು ಜನ ಕೇಳಿದರೂ ಒಬ್ಬರಿಗೆ ಹೈಕಮಾಂಡ್ ಟಿಕೆಟ್ ನೀಡುವುದು. ಉಪಚುನಾವಣೆಗೆ ಎಲ್ಲಾ ತಯಾರಿ ನಡೆದಿದ್ದು, ನಾವು ಅದಕ್ಕೆ ಸಿದ್ಧರಿದ್ದೇವೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

3 mins ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

4 mins ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

2 hours ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

2 hours ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

2 hours ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

4 hours ago