Mysore
33
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ನಾಲ್ಕು ಕೃಷಿ ಡಿಪ್ಲೊಮಾ ಕಾಲೇಜು ಪುನರಾರಂಭ

ಬೆಂಗಳೂರು: ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ ನೀಡಲಾಗಿದೆ.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮಂಡ್ಯ ವಿ.ಸಿ ಫಾರ್ಮ್, ಶಿವಮೊಗ್ಗ ಕೃಷಿ ವಿ.ವಿ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರ ಕಾಲೇಜು, ಧಾರವಾಡ ಕೃಷಿ ವಿ.ವಿ ವ್ಯಾಪ್ತಿಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕಾಲೇಜು ಮತ್ತು ರಾಯಚೂರು ಕೃಷಿ ವಿ.ವಿ ವ್ಯಾಪ್ತಿಯ ಬೀದರ್ ಕೃಷಿ ಡಿಪ್ಲೊಮಾ ಕಾಲೇಜುಗಳು ಪುನಾರಂಭಕ್ಕೆ ರಾಜ್ಯದ ಸರ್ಕಾರದ ಅನುಮೋದನೆ ನೀಡಿದೆ.

ಈ ಡಿಪ್ಲೊಮಾ ಕೋರ್ಸ್ ಗಳನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಆದರೆ ಕೃಷಿ ಡಿಪ್ಲೊಮಾ ಕೋರ್ಸ್ ಗಳ ಪುನಾರಂಭಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಬೇಡಿಕೆ ಸಲ್ಲಿಸಿದ ಹಿನ್ನಲೆಯಲ್ಲಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ವಿಶೇಷ ಕಾಳಜಿವಹಿಸಿ ಈ ನಾಲ್ಕು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಾರಂಭಕ್ಕೆ ಅವಕಾಶ ಒದಗಿಸಿಕೊಟ್ಟಿದ್ದಾರೆ.

Tags:
error: Content is protected !!